- ವೇದ ಸುಳ್ಳಾದರು ಗಾದೆ ಸುಳ್ಳಾಗದು.
- ಅಡಿಕೆಗೆ ಹೋದ ಮಾನ ಆನೆ ಕೊಟ್ಟರು ಬರಲ್ಲ.
- ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ.
- ಎತ್ತು ಏರಿಗೆಳೀತು, ಕೋಣ ನೀರಿಗೆಳೀತು.
- ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರಂತೆ.
- ಕೈ ಕೆಸರಾದರೆ ಬಾಯಿ ಮೊಸರು.
- ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ತ?
- ಹೆಣ್ಣಿಗೆ ಹಟವಿರಬಾರದು, ಗಂಡಿಗೆ ಚಟವಿರಬಾರದು.
- ಮಾತು ಬೆಳ್ಳಿ, ಮೌನ ಬಂಗಾರ.
- ಮಾತು ಮನೆ ಮುರಿತು, ತೂತು ಓಲೆ ಕೆಡಿಸಿತು.
- ಮಂಗ ಮೊಸರು ತಿಂದು ಮೇಕೆ ಬಾಯಿಗೆ ಸವರಿದ ಹಾಗಾಯಿತು.
- ಮನೆಗೆ ಮಾರಿ, ಊರಿಗೆ ಉಪಕಾರಿ.
- ಆಳಾಗಬಲ್ಲವನು ಅರಸನಾಗಬಲ್ಲ.
- ಊರಿಗೆ ದೊರೆ ಆದರೂ ತಾಯಿಗೆ ಮಗನೆ.
- ಹೆತ್ತವರಿಗೆ ಹೆಗ್ಗಣ ಮುದ್ದು.
- ಊರೆಲ್ಲ ದೋಚಿಕೊಂಡು ಹೋದಮೇಲೆ ದೊಡ್ಡಿ (ಕೋಟೆ) ಬಾಗಿಲು ಹಾಕಿದರಂತೆ.
- ಗಿಡವಾಗಿ ಬಗ್ಗದ್ದು, ಮರವಾಗಿ ಬಗ್ಗೀತೇ?
- ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ.
- ಮನಸಿದ್ದರೆ ಮಾರ್ಗ.
- ಅಡ್ಡಗೋಡೆಯ ಮೇಲೆ ದೀಪ ಇಟ್ಟ ಹಾಗೆ.
- ಆರಕ್ಕೇರಲಿಲ್ಲ, ಮೂರಕ್ಕೀಳಿಯಲಿಲ್ಲ.
- ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ.
- ಅಕ್ಕಿ ಮೇಲೆ ಆಸೆ ನೆಂಟರ ಮೇಲೆ ಇಷ್ಟ.
- ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡಂತೆ.
- ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ.
- ಬೆಕ್ಕು ಕಣ್ಮುಚ್ಚಿ ಹಾಳು ಕುಡಿದರೆ ಜಗತ್ತಿಗೆ ಗೊತ್ತಾಗಲ್ವಾ?
- ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ.
- ಬೆಳ್ಳಗಿರೋದೆಲ್ಲ ಹಾಲಲ್ಲ, ಹೊಳೆಯೋದೆಲ್ಲ ಚಿನ್ನ ಅಲ್ಲ.
- ಹತ್ತು ಕಟ್ಟೋ ಕಡೆ ಒಂದು ಮುತ್ತು ಕಟ್ಟು.
- ಜಲ ಶೋಧಿಸಿ ನೀರು ತರ್ಬೇಕು, ಕುಲ ಶೋಧಿಸಿ ಹೆಣ್ಣು ತರ್ಬೇಕು.
- ಚಿಂತೆ ಇಲ್ಲದವನಿಗೆ ಸನ್ತೇಲು ನಿದ್ದೆ.
- ದೇವರು ವರ ಕೊಟ್ಟರು ಪೂಜಾರಿ ಕೊಡೆಬೇಕಲ್ಲ.
- ಹನುಮಂತಾನೆ ಬಾಲ ಕಡಿತಿರುವಾಗ, ಇವನ್ಯಾವನೋ ಶಾವಿಗೆ ಕೇಳಿದನಂತೆ
- ತುಂಬಿದ ಕೊಡ ತುಳುಕುವುದಿಲ್ಲ.
- ಗಂಡ ಹೆಂಡಿರ ಜಗಳ ಉಂಡು ಮಲಗೋ ತನಕ.
- ಹನಿ ಹನಿ ಸೇರಿದರೆ ಹಳ್ಳ, ತೆನೆ ತೆನೆ ಸೇರಿದರೆ ಬಳ್ಳ.
- ನಾಯಿನ ಕರೆದುಕೊಂಡು ಹೋಗಿ ಸಿಂಹಾಸಾನದ ಮೇಲೆ ಕೂರಿಸಿದ ಹಾಗಯ್ತು.
- ಹುಚ್ಚರ ಮದುವೆಯಲ್ಲಿ ಉನ್ಡೋನೆ ಜಾಣ.
- ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು.
39 ಕನ್ನಡ ಜನಪ್ರಿಯ ಗಾದೆಗಳು (Kannada Popular Proverbs)
By -
April 18, 2019
0
Tags: