ಭಾರತದ ತ್ರಿವರ್ಣ ಧ್ವಜ

SANTOSH KULKARNI
By -
0

 

  • ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು.
  • ತ್ರಿವರ್ಣ ಧ್ವಜ ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳುಪು, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ.
  • ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ
  • ಪಂಡಿತ್ ಜವಾಹರ್ ಲಾಲ್ ನೆಹರು ೧೯೪೭ ಜುಲೈ ೨೨ ರಂದು ಅಸೆಂಬ್ಲಿಯಲ್ಲಿ ನಮ್ಮ ರಾಷ್ಟ್ರ ದ್ವಜವನ್ನು ದೇಶಕ್ಕೆ ಅರ್ಪಿಸಿದರು.
  • ನಮ್ಮ ಸರಕಾರವು ದ್ವಜ ಕೇವಲ ಕೈ ನೆಯ್ಗೆಯಿಂದಲೇ ಸಿದ್ದವಾದ ಶುದ್ಧ ಖಾದಿಯಿಂದಲೇ ಮಾಡಲ್ಪಟ್ಟಿರಬೇಕು.ಅದು ಉಣ್ಣೆಯ ಅಥವಾ ರೇಷ್ಮೆಯ ಇಲ್ಲವೇ ಹತ್ತಿಯದಾದರೂ ಅಡ್ಡಿಯಿಲ್ಲ ಆದರೆ ಅದು ಕೈ ನೂಲು ಮತ್ತು ಕೈ ನೆಯ್ಗೆಯದೇ ಇರಬೇಕು.
  • ದ್ವಜದ ಉದ್ದ ಮತ್ತು ಅಗಲ 3:2 ಪ್ರಮಾಣದಲ್ಲಿರತಕ್ಕದ್ದು
  • ರಾಷ್ಟ್ರ ಧ್ವಜ ಕರ್ನಾಟಕದಲ್ಲಿ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ.
  • ಭಾರತದ ಸಂವಿಧಾನದಲ್ಲಿ ಉಲ್ಲೇಖದಂತೆ ಮತ್ತು ಭಾರತೀಯ ಸ್ಟಾಂಡರ್ಡ್ಸ್ ಬ್ಯೂರೋದ ನಿಯಮಗಳಿಗೆ ತಕ್ಕಂತೆ ರಾಷ್ಟ್ರಧ್ವಜವನ್ನು ಉತ್ಪಾದಿಸಬೇಕು.ಬ್ಯೂರೋದ ಮಾನದಂಡಕ್ಕೆ ತಕ್ಕಂತೆ ಇಲ್ಲದಿದ್ದರೆ ಉತ್ಪನ್ನವೇ ತಿರಸ್ಕೃತವಾಗುತ್ತದೆ.
  • ದ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿದಾನಗತಿಯಲ್ಲಿ ಇಳಿಸಬೇಕು.ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು.
  • ವೇದಿಕೆಯ ಮೇಲೆ ಬಳಸುವಂತಿದ್ದಲ್ಲಿ ಸಬಿಕರ ಎದುರಿಗೆ ನಿಂತು ಭಾಷಣ ಮಾಡುವವರ ಬಲಕ್ಕೆ ದ್ವಜ ಕೋಲಿನಿಂದ ಅದನ್ನು ಹಾರಿಸ ತಕ್ಕದು.
  • ತ್ರಿವರ್ಣ ಧ್ವಜದ ವಿನ್ಯಾಸಗೊಳಿಸಿದವರು ಪಿಂಗಳಿ ವೆಂಕಯ್ಯ .

Post a Comment

0Comments

Post a Comment (0)