ಅಯೋಧ್ಯೆ ಮಹಾತೀರ್ಪು ನೀಡಿರುವ ಸಂವಿಧಾನ ಪೀಠದ ಐವರು ನ್ಯಾಯಮೂರ್ತಿಗಳ ಸಂಕ್ಷಿಪ್ತ ವಿವರ

SANTOSH KULKARNI
By -
0

 ಶತಮಾನಗಳಿಗೂ ಹೆಚ್ಚು ಕಾಲದ ರಾಮಜನ್ಮಭೂಮಿ ವಿವಾದಕ್ಕೆ ಇಂದು ತೆರೆ ಕಂಡಿದೆ.ಇತಿಹಾಸಕ್ಕೆ ಹೊಸದೊಂದು ಅಧ್ಯಾಯವೇ ಸೇರ್ಪಡೆಯಾಗಿದೆ. ಸುದೀರ್ಘ ಕಾಲದವರೆಗೆ ನಿಷ್ಪಕ್ಷಪಾತ ವಿಚಾರಣೆ ನಡೆಸಿದ ನ್ಯಾಯಪೀಠ ಐವರು ನ್ಯಾಯಮೂರ್ತಿಗಳಿಗೆ ಈ ಶ್ರೇಯಸ್ಸು ಸಲ್ಲಬೇಕು. ಅಯೋಧ್ಯೆ ತೀರ್ಪು ನೀಡಿರುವ ಸಂವಿಧಾನಪೀಠದ ಐವರು ನ್ಯಾಯಮೂರ್ತಿಗಳ ಕಿರುಪರಿಚಯ ಇಲ್ಲಿದೆ

================
✍ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯಿ:
=================
ಪ್ರಸ್ತುತ ಭಾರತದ ಮುಖ್ಯ ನ್ಯಾಯಮೂರ್ತಿಗಳಾಗಿರುವ ರಂಜನ್ ಗೋಗೊಯಿ ಮೂಲತಃ ಅಸ್ಸಾಂ ರಾಜ್ಯದವರು. ಈಶಾನ್ಯ ರಾಜ್ಯಗಳ ಭಾಗದಿಂದ ನ್ಯಾಯಾಂಗ ವ್ಯವಸ್ಥೆಯ ಉನ್ನತ ಪದವಿಯಾದ ಮುಖ್ಯ ನ್ಯಾಯಮೂರ್ತಿ ಸ್ಥಾನ ಅಲಂಕರಿಸಿರುವವರಲ್ಲಿ ಗೊಗೋಯ್‌ ಮದಲಿಗರು. ಇವರು 1978ರಲ್ಲಿ ಗುವಾಹಟಿಯ ಹೈಕೋರ್ಟ್ ನಲ್ಲಿ ವಕೀಲರಾಗಿ ತಮ್ಮ ವೃತ್ತಿ ಆರಂಭಿಸಿದರು. 2001ರ ಫೆಬ್ರವರಿ 28 ರಂದು ಕಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು. ನ್ಯಾಯಾಧೀಶರಾದ ನಂತರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಗಳಲ್ಲಿ ರಂಜನ್ ಗೋಗಯ್ ಸೇವೆ ಸಲ್ಲಿಸಿದ್ದಾರೆ. 2012ರ ಏಪ್ರಿಲ್‌ನಲ್ಲಿ ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಬಡ್ತಿ ಪಡೆದರು. ವೃತ್ತಿ ಜೀವನದಲ್ಲಿ ಹಲವು ಪ್ರಕರಣಗಳನ್ನು ಆಲಿಸಿದ್ದು, ಅವುಗಳಲ್ಲಿ ಅಯೋಧ್ಯೆ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‍ಸಿಆರ್) ಐತಿಹಾಸಿಕ ಪ್ರಕರಣಗಳಾಗಿವೆ. ನವೆಂಬರ್ 17ರಂದು ನಿವೃತ್ತಿ ಹೊಂದಲಿದ್ದಾರೆ
=================
✍ ನ್ಯಾ. ಶರದ್ ಅರವಿಂದ್ ಬೋಬ್ಡೆ:
================
ರಂಜನ್ ಗೋಗೊಯ್ ಅವರ ನಿವೃತ್ತಿ ಬಳಿಕ ನ್ಯಾ. ಶರದ್ ಅರವಿಂದ್ ಬೋಬ್ಡೆ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕವಾಗಲಿದ್ದಾರೆ. 2000ರಲ್ಲಿ ಬಾಂಬೆ ಹೈಕೋರ್ಟ್ ನಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಬೋಬ್ಡೆ ಅವರು ನೇಮಕಗೊಂಡರು. ಮಧ್ಯ ಪ್ರದೇಶದ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ಮಹಾರಾಷ್ಟ್ರ ಮೂಲದವರಾಗಿರುವ ಬೋಬ್ಡೆ ಅವರು ಏಪ್ರಿಲ್ 2013ರಲ್ಲಿ ಸುಪ್ರಿಂಕೋರ್ಟಿಗೆ ಬಡ್ತಿ ಪಡೆದರು. 63 ವರ್ಷದ ಬೋಬ್ಡೆ ನವೆಂಬರ್ 17ರ ನಂತರ ಸಿಜೆಐ ಆಗಿ 18 ತಿಂಗಳು ಕಾರ್ಯ ನಿರ್ವಹಿಸಲಿದ್ದಾರೆ. ಇತ್ತೀಚೆಗೆ ಖಾಸಗಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ, ವಿಶ್ವದ ಪ್ರಮುಖವಾದ ಕೇಸ್ ಗಳಲ್ಲಿ ಅಯೋಧ್ಯೆ ಪ್ರಕರಣ ಸಹ ಒಂದಾಗಿದೆ ಎಂದು ಹೇಳಿದ್ದರು. ನ್ಯಾ. ರಂಜನ್‌ ಗೋಗೋಯ್‌ ನಿವೃತ್ತಿ ನಂತರ ನ.18ರಿಂದ ಭಾರತ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
=================
✍ ನ್ಯಾ. ಡಿ.ವೈ.ಚಂದ್ರಚೂಡ್
===============
ಡಿ.ವೈ.ಚಂದ್ರಚೂಡ್ ಮೇ 2016ರಲ್ಲಿ ಸುಪ್ರೀಕೋರ್ಟಿನ ನ್ಯಾಯಾಧೀಶರಾಗಿ ನೇಮಕಗೊಂಡರು. ಇವರು ಸುಪ್ರೀಂ ಕೋರ್ಟಿನಲ್ಲಿ ಮುಖ್ಯ ನ್ಯಾಯಾಧೀಶರಾಗಿ ಅತಿ ಹೆಚ್ಚು ವರ್ಷ ಸೇವೆ ಸಲ್ಲಿಸಿದ್ದ ವೈ.ವಿ. ಚಂದ್ರಚೂಡ್ ಅವರ ಪುತ್ರ. ಹಾರ್ವರ್ಡ್ ನಲ್ಲಿ ಕಾನೂನು ಪದವಿ ಪಡೆದಿರುವ ಚಂದ್ರಚೂಡ್ ಬಾಂಬೆ ಮತ್ತು ಅಲಹಬಾದ್ ಹೈಕೋರ್ಟಿನಲ್ಲಿ ಸೇವೆ ಸಲ್ಲಿಸಿದ್ದಾರೆ.
==================
✍ ನ್ಯಾ.ಅಶೋಕ್ ಭೂಷಣ್:
=================
1979ರಲ್ಲಿ ನ್ಯಾ.ಅಶೋಕ್ ಭೂಷಣ್ ಅಲಹಬಾದ್ ಹೈಕೋರ್ಟಿನಲ್ಲಿ ವಕೀಲರಾಗಿ ತಮ್ಮ ವೃತ್ತಿ ಅರಂಭಿಸಿದರು. 2001ರಲ್ಲಿ ನ್ಯಾಯಾಧೀಶರಾಗಿ ನೇಮಕಗೊಂಡರು. ಜುಲೈ 2014ರಲ್ಲಿ ಕೇರಳ ಹೈಕೋರ್ಟಿಗೆ ವರ್ಗಾವಣೆಗೊಂಡು ಮಾರ್ಚ್ 2015ರಲ್ಲಿ ಕೇರಳ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕಗೊಂಡರು. ಮೇ 13, 2016ರಲ್ಲಿ ಸುಪ್ರೀಂಕೋರ್ಟಿನ ನ್ಯಾಯಾಧೀಶರಾಗಿ ನೇಮಕಗೊಂಡು ಸೇವೆ ಸಲ್ಲಿಸುತ್ತಿದ್ದಾರೆ.
==============
✍ ನ್ಯಾ.ಅಬ್ದುಲ್ ನಜೀರ್:
===============
ಇವರು ಕರ್ನಾಟಕ ಮೂಲದವರು. 1983 ಫೆಬ್ರವರಿಯಲ್ಲಿ ಕರ್ನಾಟಕದ ಹೈಕೋರ್ಟಿನಲ್ಲಿ ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು. 20 ವರ್ಷಗಳ ಕಾಲ ನ್ಯಾ.ಅಬ್ದುಲ್ ನಜೀರ್ ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ. 2003ರಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡರು. ತದನಂತರ ಖಾಯಂ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದರು. ಫೆಬ್ರವರಿ 17, 2017ರಂದು ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ಪಡೆದರು.

Post a Comment

0Comments

Please Select Embedded Mode To show the Comment System.*