ಯಾವ ಜನ್ಮದ ಮೈತ್ರಿ |
ಎಲ್ಲಿದ್ದರೇನಂತೆ, ನಿನ್ನನೊಲಿಯದೆ ಮಾಣೆ, ||ಗುರುದೇವನಾಣೆ, ಓ ನನ್ನ ನೆಚ್ಚಿನ ಬಂಧು !
ಯಾವ ಜನ್ಮದ ಮೈತ್ರಿ |
ವಿಶ್ವ ಜೀವನವೊಂದು ಪಾರವಿಲ್ಲದ ಸಿಂಧು ! ||
ಮೇಲೆ ತೆರನೊರೆಯೆದ್ದು ಭೋರ್ಗರೆಯುತಿರೆ ರೇಗಿ
ಅದರಂತರಾಳದಲಿ ಗುಪ್ತಗಾಮಿನಿಯಾಗಿ ;
ಹೃದಯಗಳು ನಲಿಯುತಿವೆ ಪ್ರೇಮ ತೀರ್ಥದಿ ಮಿಂದು !
ಯಾವ ಜನ್ಮದ ಮೈತ್ರಿ |
ಅದರರ್ಥಗಿರ್ಥಗಳು ಸೃಷ್ಟಿಕರ್ತನಿಗಿರಲಿ ; ವ್ಯರ್ಥ ಜಿಜ್ಞಾಸೆಯಲಿ ಕಾಲಹರಣವದೇಕೆ?
ಬಾರಯ್ಯ, ಮಮಬಂಧು, ಜೀವನಪಥದೊಳಾವು
ಒಂದಾಗಿ ಮುಂದುವರಿಯುವ; ಹಿಂದಿರಲಿ ಸಾವು
ಯಾವ ಜನ್ಮದ ಮೈತ್ರಿ ಈ ಜನ್ಮದಲಿ ಬಂದು ನಮ್ಮಿಬ್ಬರನು ಮತ್ತೆ ಬಂಧಿಸಿಹುದೋ ಕಾಣೆ||
ಯಾವ ಜನ್ಮದ ಮೈತ್ರಿ ||
ರಚನೆ : ಕುವೆಂಪು