Showing posts with label scientist. Show all posts
Showing posts with label scientist. Show all posts

Friday, April 10, 2026

What would it mean if scientists find dark matter in the Milky Way's core?

 The Milky Way’s core is one of the worst places to make dark matter stand out—and that’s exactly why a convincing signal there would be such a big deal.

An artist’s impression shows the structure of the Milky Way, including its spiral arms and central bulge.

So if scientists were to find convincing evidence of dark matter concentrated in the Milky Way’s core, it would mean several important things at once.

First, it would sharpen the map of the Galaxy’s mass.

There are two broad possibilities researchers argue over:

  • A “cuspy” profile: dark matter density climbs sharply toward the center. This is common in many computer simulations.
  • A “cored” profile: the inner density flattens out. That can happen if ordinary matter, star formation, and supernova feedback stir the central region enough to redistribute dark matter.

Finding dark matter in the core would therefore be less like discovering an entirely new ingredient and more like finally reading the most smudged part of the recipe.

Second, it could test what dark matter actually is.

That is why the Galactic Center has been the focus of so much attention, including debates over the so-called Galactic Center GeV excess in gamma rays. Some researchers have suggested dark matter; others argue that a population of unresolved millisecond pulsars or other ordinary astrophysical sources explains it better. If scientists found a signal in the core that matched dark matter expectations and ruled out these alternatives, that would be a major turning point: dark matter would start to look like a measurable particle phenomenon, not only a gravitational one.

A Hubble map shows the inferred distribution of dark matter in the galaxy supercluster Abell 901/902.

Third, it would matter for black hole and galaxy-formation physics.

That would feed into a much bigger question: how galaxies assemble. Dark matter is the scaffolding on which galaxies form. The core tells astronomers how that scaffolding responds after the luminous galaxy grows inside it.

What it would is that dark matter has suddenly been found only in the Milky Way’s center, or that scientists have directly “seen” a dark cloud sitting there. More likely, it would mean they had extracted a faint, distinctive signature from a very complicated environment and shown that no ordinary explanation fits as well.

In that sense, a confirmed dark-matter detection in the Milky Way’s core would be important not because it would prove dark matter exists—that case is already strong—but because it would reveal its inner distribution, constrain its particle properties, and connect cosmology to the most crowded region of the Galaxy.

Thursday, February 26, 2026

Who is the richest scientist in the world?

 Dr. Patrick Soon-Shiong ($12 billion)



He's an entrepreneur

Patrick Soon-Shiong born July 29, 1952 is a South African-born American surgeon, medical researcher, businessman, philanthropist, and professor at University of California at Los Angeles. He is currently chairman of the Chan Soon-Shiong Family Foundation and chairman and CEO of the Chan Soon-Shiong Institute for Advanced Health, National LambdaRail, the Healthcare Transformation Institute and NantWorks, LLC.


He owns the Lakers

He is minority owner of the Los Angeles Lakers and is ranked by Forbes as the wealthiest American in the healthcare industry and the wealthiest man in Los Angeles with a net worth of US$12 billion.


He's won a whole lot of scientific awards

Soon-Shiong’s research has been recognized by national and international awards such as:

  • Association for Academic Surgery Award for Research
  • American College of Surgeons Schering Scholar
  • Royal College Physicians and Surgeons Research Award
  • Peter Kiewit Distinguished Membership in Medicine Award
  • International J.W. Hyatt Award for Service to Mankind.


Soon-Shiong received the 2006 Gilda Club Award for the advancement of cancer medicine and is a recipient of a 2007 Ellis Island Medal of Honor as well as the St. Mary Medical Center Life Achievement Award in 2007 and the St. John’s Health Center Caritas Award in 2007. In 2008, he received the Medical Visionary Award from the Pancreatic Cancer Action Network for his work in pancreatic cancer & the Los Angeles County Economic Development Council Eddy Award in November 2009. The Los Angeles Business Journal recognized him as their 2010 Business Person of the Year, and the National Library of Medicine awarded Soon-Shiong the Distinguished Medical Science Award. The University of Arizona awarded him an honorary doctorate in December 2010, and Visiting Professor of the Imperial College of London in 2011.

Wednesday, January 28, 2026

How do scientists measure and track something as far away as Voyager 1 in space?

 Great question!

Since the signals from the two Voyager spacecraft are SO faint at their current distances (e.g., Voyager 1 is an entire light-day from Earth), if we did not have a very good idea where they are, we would be unlikely to ever find them.

As to the instruments used to communicate with them, we rely on the NASA Deep Space Network, supplemented occasionally by the Very Large Array, the Very Long Baseline Array, the European Deep Space Network and the Japanese Deep Space Network.

Here is a rough diagram of the NASA DSN:

and here are pictures of the radiotelescopes at each location:

We are currently in the process of upgrading the dishes at each location:

Tuesday, December 24, 2024

ಶ್ರೀನಿವಾಸ ರಾಮಾನುಜನ್


ಭಾರತದ ಮಹಾನ್ ಮೇಧಾವಿ ಗಣಿತಜ್ಞ ಶ್ರೀನಿವಾಸ ರಾಮಾನುಜನ್ ಅವರು 1887ರ ಡಿಸೆಂಬರ್ 22ರಂದು ಜನಿಸಿದರು.


“ನೀನು ಹೇಗಿದ್ದೀಯ?” ಎಂದು ಆಗಂತುಕ ಆತುರ ಮತ್ತು ಒಲವಿನ ದನಿಯಲ್ಲಿ ಕೇಳಿದ.

“ಪರವಾಗಿಲ್ಲ, ನಿಮಗೆ ಧನ್ಯವಾದ” ಹಾಸಿಗೆಯಲ್ಲಿ ಮಲಗಿದ್ದ ರೋಗಿ ಉತ್ತರಿಸಿದ.

ಆದರೆ ಆತನಿಗೆ ಇದರಿಂದ ತೃಪ್ತಿಯಾಗಲಿಲ್ಲ. ರೋಗಿಯ ಮುಖ ಮಾರಕ ವ್ಯಾಧಿಯ ವಿರುದ್ಧ ಆತನ ಬಲವಾದ ಹೋರಾಟವನ್ನು ಸೂಚಿಸುತ್ತಿತ್ತು. ಕೆಲವು ಕ್ಷಣಗಳ ಬಳಿಕ ಆತ ಮತ್ತೆ ಮುಂದುವರೆಸಿದ:

“ನಾನು ಇಲ್ಲಿಗೆ ಬಂದಿರುವ ಟ್ಯಾಕ್ಸಿಯ ಫಲಕದ ಸಂಖ್ಯೆ 1729 (=7 x 13 x 19). ಇದೊಂದು ನೀರಸ ಸಂಖ್ಯೆ ಎಂದೆನಿಸುತ್ತದೆ. ಆದರೂ ಇದು ಅಪಶಕುನವಲ್ಲವೆಂದು ನಂಬಿದ್ದೇನೆ.”

ರೋಗಿಯಲ್ಲಿದ್ದ ಅದ್ಭುತ ಪ್ರತಿಭೆ ಆತನ ಕಣ್ಣುಗಳಲ್ಲಿ ಮಿನುಗಿ ಹೊಳೆಯಿತು. ಆತ ಸ್ಪಂದಿಸಿದ:

“ಇಲ್ಲ, ಅದೊಂದು ಅತ್ಯಂತ ಸ್ವಾರಸ್ಯಕರ ಸಂಖ್ಯೆ. ನಿಜವಾಗಿ ಅದು ಎರಡು ಘನಗಳ ಮೊತ್ತವಾಗಿ ಎರಡು ವಿಭಿನ್ನ ರೀತಿಗಳಲ್ಲಿ ನಿರೂಪಿಸಬಹುದಾದ ಕನಿಷ್ಠ ಸಂಖ್ಯೆ.” (1729 = 12³ + 1³ = 10³ + 9³).

ವಿಶೇಷ ಆಗಂತುಕ ಬೇರೆ ಯಾರೂ ಅಲ್ಲದೆ ವಿಖ್ಯಾತ ಪ್ರಾಧ್ಯಾಪಕ ಜಿ. ಎಚ್. ಹಾರ್ಡಿಯವರೇ ಆಗಿದ್ದರು. ನಾಲ್ಕು ವರ್ಷಗಳಿಂದ ಆ ರೋಗಿಯ ನಿಕಟ ಪರಿಚಯವಿದ್ದ ಅವರಿಗೆ ಅಚ್ಚರಿಯಾಯಿತು. ಅವರು ಪ್ರಶ್ನಿಸಿದರು.

“ನಾಲ್ಕನೆಯ ಘಾತಗಳಿಗೆ ಹೊಂದುವ ಇಂಥ ಸಂಖ್ಯೆ ನಿಮಗೆ ಗೊತ್ತೇ?”

ಒಂದು ಕ್ಷಣದ ಬಳಿಕ ಉತ್ತರ ಬಂತು:

“ಅಂಥ ಯಾವ ಸ್ಪಷ್ಟ ಉದಾಹರಣೆಯೂ ತಕ್ಷಣ ಹೊಳೆಯುತ್ತಿಲ್ಲ. ಆದರೆ ಅಂಥ ಸಂಖ್ಯೆ ಅತಿ ದೊಡ್ಡದಾಗಿರಲೇಬೇಕೆಂದು ಭಾವಿಸಿದ್ದೇನೆ.”

ಅವರ ಮಾತು ನಿಜವಾಗಿತ್ತು. ಆ ಸಂಖ್ಯೆಯಲ್ಲಿ ಒಂಬತ್ತು ಅಂಕೆಗಳಿದ್ದವು. ಅಂದು 635318657 (=158⁴ + 59⁴ = 134⁴ + 133⁴).

ಮರಣಶಯ್ಯೆಯಲ್ಲಿದ್ದ ವ್ಯಕ್ತಿಯೊಬ್ಬರು ಮಾನಸಿಕವಾಗಿ ಅಷ್ಟು ಚುರುಕು ಮತ್ತು ಜಾಗರೂಕರಾಗಿದ್ದರೆಂಬುದು ಅವರ ಅಪಾರ ಗಣಿತ ಸಾಮರ್ಥ್ಯದ ದ್ಯೋತಕ ಮತ್ತು “ಪ್ರತಿ ಧನಪೂರ್ಣಾಂಶವೂ ರಾಮಾನುಜನ್ನರ ವೈಯಕ್ತಿಕ ಮಿತ್ರರುಗಳಲ್ಲೊಂದು” ಎಂಬ ವಿಖ್ಯಾತ ನುಡಿಯ ಸತ್ಯತೆಯನ್ನು ಸಾಬೀತುಪಡಿಸುತ್ತದೆ. ಅವರಿಗೆ “ಸಂಖ್ಯೆಗಳ ವೈಲಕ್ಷಣಗಳನ್ನು ನಂಬಲಸಾಧ್ಯವಾದಂಥ ರೀತಿಯಲ್ಲಿ ನೆನಪಿಡುವ’ ಅಪೂರ್ವ ಸಾಮರ್ಥ್ಯವಿತ್ತು. ಜೇಮ್ಸ್ ಆರ್. ನ್ಯೂಮನರ ದಿ ವರ್ಲ್ಡ್ ಆಫ್ ಮ್ಯಾಥಮೆಟಿಕ್ಸ್ ಎಂಬ ನಾಲ್ಕು ಸಂಪುಟಗಳ ಚಿರಸ್ಥಾಯಿ ಉದ್ಗ್ರಂಥದಲ್ಲಿ ರಾಮಾನುಜನ್ನರ ಕುರಿತು ಈ ಉಲ್ಲೇಖವಿದೆ. ಶುದ್ಧ ಗಣಿತದ ಬತ್ತಳಿಕೆಯಲ್ಲಿ ವಿಶ್ಲೇಷಣಾ ಆಯುಧಗಳ ಭಾರೀ ಸಂಗ್ರಹವಿದೆ ಮತ್ತು ಎಲ್ಲ ಸರಳತೆ ಗತಕಾಲದ ವಿಚಾರವೆಂದು ತಿಳಿಯುತ್ತಿದ್ದ ಆ ದಿನಗಳಲ್ಲಿ “ಈ ಎಲ್ಲ ಪರಿಕರಗಳ ನೆರವಿಲ್ಲದೆಯೇ ಹೊಸ ವಿಚಾರಗಳನ್ನು ಮಂಡಿಸಬಲ್ಲ ಒಬ್ಬ ಜೀನಿಯಸ್ ಉದಯಿಸಿದರು”. ನ್ಯೂಮನರು ಮುಂದುವರಿಸಿ, “ಶ್ರೀನಿವಾಸ ರಾಮಾನುಜನ್ನರ ಜೀವನ ಒಂದು ಯುಗಾರಂಭವನ್ನು ಸೂಚಿಸುತ್ತದೆ. ಭಾರತದಲ್ಲಿ ವಿವಿಧ ಕಾಲ ಘಟ್ಟಗಳಲ್ಲಿ ಉನ್ನತ ಪ್ರತಿಭೆಯ ಗಣಿತಜ್ಞರಿದ್ದರು. ಕಾಲಾನುಕ್ರಮದಲ್ಲಿ ಅಂಥವರನ್ನು ಕೊನೆಯ ಗ್ರೀಕ್ ಕಾಲದವರೆಗೆ ಗುರುತಿಸಬಹುದು. ಆದರೆ ಉತ್ತುಂಗತೆಯ ನಿರಪೇಕ್ಷಮಾನದಿಂದ ಅಳೆದಾಗ ಪೌರ್ವಾತ್ಯ ಗಣಿತಜ್ಞರಲ್ಲೆಲ್ಲಾ, ರಾಮಾನುಜನ್ನರ ಜೀನಿಯಸ್ ಅತ್ಯುಚ್ಚವೆಂದೆನಿಸುತ್ತದೆ” ಎಂದು ಹೇಳಿದ್ದಾರೆ.

ಶ್ರೀನಿವಾಸ ರಾಮಾನುಜನ್ನರ ಬಗ್ಗೆ ಬರೆಯುತ್ತ ಜವಾಹರಲಾಲ್ ನೆಹರೂರವರು ತಮ್ಮ ಡಿಸ್ಕವರಿ ಆಫ್ ಇಂಡಿಯಾದಲ್ಲಿ ಹೀಗೆ ನುಡಿಯುತ್ತಾರೆ: “ಭಾರತದಲ್ಲಿ ಗಣಿತದ ವಿಚಾರದಲ್ಲಿ, ಇತ್ತೀಚಿಗಿನ ಒಬ್ಬರು ಅಸಾಧಾರಣ ವ್ಯಕ್ತಿಯನ್ನು ಕುರಿತು ಯೋಚಿಸುವುದು ಅನಿವಾರ್ಯವಾಗುವಂತೆ ಮಾಡುತ್ತದೆ. ಅವರೇ ಶ್ರೀನಿವಾಸ ರಾಮಾನುಜನ್. ದಕ್ಷಿಣ ಭಾರತದ ಒಂದು ಬಡ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿ ಸೂಕ್ತ ವಿದ್ಯಾಭ್ಯಾಸಕ್ಕೆ ಅವಕಾಶಗಳಿಲ್ಲದೆ ಅವರು ಮದ್ರಾಸ್ ಪೋರ್ಟ್ ಟ್ರಸ್ಟ್ನಲ್ಲಿ ಒಬ್ಬ ಕಾರಕೂನರಾದರು. ಆದರೆ ಅವರು ಸಹಜ ಪ್ರತಿಭೆಯ ಯಾವುದೋ ತಡೆಯಲಾಗದ ಲಕ್ಷಣಗಳಿಂದ ಬುದ್ಬುದಿಸುತ್ತಿದ್ದರು; ಸಂಖ್ಯೆ ಹಾಗೂ ಸಮೀಕರಣಗಳೊಂದಿಗೆ ಅವರು ಬಿಡುವಿನ ಸಮಯದಲ್ಲಿ ಆಟವಾಡುತ್ತಿದ್ದರು. ಮುಂದೆ ಅವರು ಕೇಂಬ್ರಿಜ್ಗೆ ತೆರಳಿ ಅಲ್ಲಿ ಬಹಳ ಅಲ್ಪಾವಧಿಯಲ್ಲೇ ಮೂಲಭೂತ ಮೌಲ್ಯದ ಹಾಗೂ ವಿಸ್ಮಯಕರ ಸ್ವಂತಿಕೆಯ ಕಾರ್ಯವೆಸಗಿದರು. ಇಂಗ್ಲೆಂಡಿನ ರಾಯಲ್ ಸೊಸೈಟಿ ತನ್ನ ನಿಯಮಗಳನ್ನು ಭಾಗಶಃ ಸಡಿಲಿಸಿ ಅವರನ್ನು ಫೆಲೋ ಆಗಿ ಆಯ್ಕೆ ಮಾಡಿತು. ಪ್ರೊಫೆಸರ್ ಜೂಲಿಯನ್ ಹಕ್ಸ್ಲಿಯವರು, ನಾನು ತಿಳಿದಿರುವಂತೆ ಎಲ್ಲೋ ಒಂದೆಡೆ ರಾಮಾನುಜರನ್ನು ಈ ಶತಮಾನದ ಶ್ರೇಷ್ಠತಮ ಗಣಿತಜ್ಞ ಎಂದಿದ್ದಾರೆ.”

ಈ ಮಹಾನ್ ಮೇಧಾವಿ ಶ್ರೀನಿವಾಸ ಅಯ್ಯಂಗಾರ್ ರಾಮಾನುಜನ್ ಅಯ್ಯಂಗಾರ್ ಅಥವಾ ಜನಪ್ರಿಯವಾಗಿ ಶ್ರೀನಿವಾಸ ರಾಮಾನುಜನ್ ಎಂದು ಹೆಸರುವಾಸಿಯಾದ ಇವರು 1887ರ ಡಿಸೆಂಬರ್ 22ರಂದು ತಮಿಳುನಾಡಿನ ಈರೋಡಿನಲ್ಲಿದ್ದ ತಮ್ಮ ತಾತನ ಮನೆಯಲ್ಲಿ ಜನ್ಮ ತಳೆದರು. ರಾಮಾನುಜನ್ನರ ತಂದೆ ಬಟ್ಟೆ ಅಂಗಡಿಯಲ್ಲಿ ಒಬ್ಬ ಗುಮಾಸ್ತರಾಗಿದ್ದರು. ತಾಯಿ ಅಪಾರ ದೈವ ಶ್ರದ್ಧಾಭಕ್ತಿಗಳಿದ್ದ ಮಹಿಳೆ.

ಬಾಲ್ಯದಲ್ಲಿ ರಾಮಾನುಜನ್ನರು ಶಾಂತ ಮತ್ತು ಆಲೋಚನಾಸಕ್ತ ಸ್ವಭಾವದವರಾಗಿದ್ದರು. ತನ್ನ ತಾಯಿಯಿಂದ ದೇವರನಾಮ ಮತ್ತು ಭಕ್ತಿಗೀತೆಗಳನ್ನೂ ಕಲಿತ ಅವರು ಅಧ್ಯಾತ್ಮಿಕ ವಿಚಾರಗಳಲ್ಲಿ ಆಸಕ್ತಿ ತಳೆದರು. ಅವರು ಬೆಳೆದಂತೆ ಧಾರ್ಮಿಕ ಉದ್ಗ್ರಂಥಗಳನ್ನು ಮತ್ತು ಭಕ್ತಿಸಾಹಿತ್ಯವನ್ನು ಓದಿ ಅದರಲ್ಲಿ ಹೆಚ್ಚಿನದನ್ನು ಕಂಠಪಾಠ ಮಾಡಿದ್ದರು. ಅವರು ವೇದ, ಉಪನಿಷತ್ತು, ತಿರುಕ್ಕುರುಳ್ ಮುಂತಾದ ಶಾಸ್ತ್ರಗ್ರಂಥಗಳಿಂದ ಋಕ್ಕು ಮತ್ತು ಶ್ಲೋಕಗಳನ್ನೂ, ಹಾಗೆಯೇ ಸಂತರ ಮತ್ತು ಜ್ಞಾನಿಗಳ ನುಡಿಗಳನ್ನು ತಮಿಳು ಕೃತಿಗಳಿಂದ ನಿರರ್ಗಳವಾಗಿ ಹೇಳಬಲ್ಲವರಾಗಿದ್ದರು. ಐದನೆಯ ವಯಸ್ಸಿಗೆ ಶಾಲೆಗೆ ಸೇರಿದ ಅವರಿಗೆ ಪ್ರತಿಯೊಂದರಲ್ಲೂ ಕಲಿಕೆಯ ಕುತೂಹಲವಿತ್ತು. 1903ರಲ್ಲಿ ಅವರು ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದರು. ಆದರೆ ಎಫ್. ಎ ತರಗತಿಗಳಿಗೆ ಸೇರಿದಾಗ ಅವರಿಗೆ ಗಣಿತದ ಹೊರತಾಗಿ ಇನ್ನ್ಯಾವುದೇ ವಿಷಯಗಳ ಕುರಿತಾಗಿ ಕಿಂಚಿತ್ತೂ ಆಸಕ್ತಿ ಹುಟ್ಟಲಿಲ್ಲ. ಈ ನಿರಾಸಕ್ತಿ ಮತ್ತು ನಿರಂತರ ಅವರ ಜೊತೆಗೂಡಿದ್ದ ಅನಾರೋಗ್ಯಗಳು ಅವರ ಓದನ್ನು ಅಲ್ಲಿಗೇ ಮೊಟಕುಗೊಳಿಸಿಬಿಟ್ಟವು. ಇದೇ ನೆವವಾಗಿ ಅವರು ಯಾವಾಗಲೂ ಗಣಿತದಲ್ಲೇ ಮುಳುಗಿಬಿಟ್ಟರು. ಇದು ಮನೆಯವರಿಗೆ ಇಷ್ಟವಾಗಲಿಲ್ಲ. ಜೀವನದ ದಾರಿ ಬದಲಾಗಲಿ ಎಂದು ವಿವಾಹ ಏರ್ಪಡಿಸಿದರು.

ಮದುವೆ ಒಂದು ಬದಲಾವಣೆಯನ್ನು ತಂದಿತು. ಇನ್ನು ಮುಂದೆ ತಾನು ಹೆತ್ತವರಿಗೆ ಹೊರೆಯಾಗಬಾರದೆಂದು ರಾಮಾನುಜನ್ನರು ನಿರ್ಧರಿಸಿದರು. ಇವರ ಮೇಧಾವಿತನದ ಕುರಿತಾದ ಅಭಿಮಾನವುಳ್ಳ ಹಿರಿಯರ ಶಿಫಾರಸ್ಸಿನಿಂದ ಮದ್ರಾಸಿನಲ್ಲಿ ಅಕೌಂಟೆಂಟ್ ಜನರಲ್ ಕಚೇರಿಯಲ್ಲಿ ಅವರಿಗೆ ಕೆಲಸ ದೊರೆಯಿತಾದರೂ ಅದು ಕೇವಲ ಎರಡು ತಿಂಗಳಮಟ್ಟಿಗೆ ಮಾತ್ರ ಇತ್ತು. ಪುನಃ ಹಸಿದ ಹೊಟ್ಟೆಯ ಬಡತನ, ಅನಾರೋಗ್ಯ ಅವರಿಗೆದುರಾಯಿತು. ಸ್ವಲ್ಪ ದಿನ ಮನೆಯ ಪಾಠಮಾಡಿದರು. ಈ ನಡುವೆ ತಮ್ಮ ಗಣಿತದ ಕುರಿತಾದ ಆಲೋಚನೆಗಳನ್ನು ದಾಖಲಿಸುವ ಕೆಲಸವನ್ನು ಮಾತ್ರ ನಿಲ್ಲಿಸಲಿಲ್ಲ. 1910ರಲ್ಲಿ ಅವರು ದಿವಾನ್ ಬಹದ್ದೂರರನ್ನು ಕಂಡಾಗ ಬಹದ್ದೂರರು ತಮಗೇನು ಬೇಕೆಂದು ಕೇಳಿದಾಗ “ಸಂಶೋಧನೆ ಮುದುವರಿಸಿಕೊಂದು ಹೋಗುವಷ್ಟರಮಟ್ಟಿಗೆ ಬದುಕಿರಲು ಸಾಕಾಗುವಷ್ಟು ಆನ್ನ” ಎಂದರು ರಾಮಾನುಜನ್. ಬಹದ್ದೂರರು ತಾವೇ ಸ್ವತಃ ಇಪ್ಪತ್ತೈದು ರೂಪಾಯಿಗಳ ಮಾಸಿಕ ಧನಸಹಾಯ ಮಾಡಲಾರಂಭಿಸಿದರು. ಆದರೆ ರಾಮಾನುಜನ್ ಅವರಿಗೆ ಹೀಗೆ ಹಣ ಪಡೆಯುವ ಮನಸ್ಸಿರಲಿಲ್ಲ. ಮತ್ತೆ ಅವರ ಅಭಿಮಾನವುಳ್ಳ ಹಿರಿಯರ ಶಿಫಾರಸ್ಸಿನಿಂದ ಅವರು ಮದ್ರಾಸಿನ ಪೋರ್ಟ್ ಟ್ರಸ್ಟ್ ಕಚೇರಿಯಲ್ಲಿ ಗುಮಾಸ್ತರಾಗಿ ಕೆಲಸ ಮಾಡಲು ಆರಂಭಿಸಿದರು.

ಏತನ್ಮಧ್ಯೆ ಶ್ರೀನಿವಾಸ ರಾಮಾನುಜನ್ ಅವರ ಬೆಂಗಾವಲಾಗಿದ್ದ ಪ್ರೊ. ಪಿ. ವಿ. ಶೇಷು ಅಯ್ಯರ್ ಅವರಿಂದ ಕಳುಹಿಸಲ್ಪಟ್ಟ ಪ್ರಶ್ನೋತ್ತರಗಳ ರೂಪದಲ್ಲಿನ ಬರಹ ಇಂಡಿಯನ್ ಮ್ಯಾಥಮೆಟಿಕಲ್ ಸೊಸೈಟಿಯ ನಿಯತಕಾಲಿಕ 1911ರಲ್ಲಿ ಪ್ರಕಟವಾಯಿತು. ಈ ಸಂಪುಟದ ಒಂದು ಸಂಚಿಕೆಯಲ್ಲಿ ರಾಮಾನುಜನ್ನರ ‘ಬರ್ನೌಲಿ ಸಂಖ್ಯೆಗಳ ಕೆಲವು ಲಕ್ಷಣಗಳು” ಪ್ರಕಟಗೊಂಡಿತು. 1912ರಲ್ಲಿ ಇನ್ನೆರಡು ಪ್ರಬಂಧಗಳು ಬಂದವು. ಮದ್ರಾಸ್ ಪೋರ್ಟ್ ಟ್ರಸ್ಟಿನ ಅಧ್ಯಕ್ಷ ಸರ್ ಫ್ರಾನ್ಸಿಸ್ ಸ್ಪ್ರಿಂಗ್ ರಾಮಾನುಜನ್ ಅವರಲ್ಲಿ ಆಸಕ್ತಿ ತಳೆದು ಅವರ ಪ್ರಗತಿಯನ್ನು ವೀಕ್ಷಿಸುತ್ತಿದ್ದರು. ಒಂದು ದಿನ ಅವರ ಸಹಿಗಾಗಿ ಒಂದು ಕಡತ ಬಂತು. ಅದನ್ನು ಪರಾಂಬರಿಸುತ್ತಿದ್ದಾಗ ಎಲಿಪ್ಟಿಕ್ ಅನುಕಲನಾಂಕಗಳಿಗೆ ಸಂಬಂಧಿಸಿದ ಕೆಲವು ಫಲಿತಗಳನ್ನೊಳಗೊಂಡ ಬಿಳಿ ಹಾಳೆಗಳನ್ನು ಕಂಡರು. ಸ್ವಯಂ ಗಣಿತದಲ್ಲಿ ಆಸಕ್ತರಾಗಿದ್ದ ಅವರಿಗೆ ಅದು ರಾಮಾನುಜನ್ ಅವರ ಕೆಲಸವೆಂದು ತಿಳಿದು ಸಂತೋಷವಾಯಿತು.

ಪೋರ್ಟ್ ಟ್ರಸ್ಟಿನಲ್ಲಿನ ಕೆಲಸ ಶ್ರೀನಿವಾಸ ರಾಮಾನುಜನ್ ಮತ್ತು ಅವರ ಕುಟುಂಬಕ್ಕೆ ಅರೆಹೊಟ್ಟೆಯನ್ನು ತುಂಬಿಸುವಷ್ಟು ಮಾತ್ರದ್ದಾಗಿತ್ತು. ಕಡುಬಡತನ ಮತ್ತು ಎಲ್ಲ ತರಹದ ಸಂಕಷ್ಟವಿದ್ದರೂ ರಾಮಾನುಜನ್ ಎಂದೂ ತಾಳ್ಮೆಗೆಡುತ್ತಿರಲಿಲ್ಲ. ಅವರು ಮದ್ರಾಸಿನಲ್ಲಿ ಟ್ರಿಪ್ಲಿಕೇನಿನ ಸಮೀಪದಲ್ಲಿ ವಾಸಿಸುತ್ತಿದ್ದಾಗ ಒಂದು ರಾತ್ರಿ ಖಗೋಳ ಪ್ರಪಂಚದ ವಿಸ್ಮಯಗಳ ಕುರಿತು ಗೆಳೆಯನೊಡನೆ ಮಾತನಾಡುತ್ತಿದ್ದರು. ಅದನ್ನು ತಡೆಯಲು ಯಾರೋ ಹಠಾತ್ತಾಗಿ ರಾಮಾನುಜನ್ನರ ತಲೆಯ ಮೇಲೆ ಗಡಿಗೆ ತುಂಬಾ ನೀರು ಸುರಿದರು. ಕೋಪಾವಶೇಶದಲ್ಲಿ ಸಿಡಿಯುವ ಬದಲು, ರಾಮಾನುಜನ್ ನಗುತ್ತ ಅಂದರು: “ದೇವರ ದಯೆ, ನನಗೆ ಗಂಗಾಸ್ನಾನವಾಯಿತು. ಇನ್ನೂ ಜಾಸ್ತಿ ಇದ್ದರೆ ಸಂತೋಷ.”. ಶಾಂತ ಮತ್ತು ಏಕಾಗ್ರಚಿತ್ತದಿಂದ ರಾಮಾನುಜನ್ ತಮ್ಮ ಕೆಲಸ ಮುಂದುವರಿಸಿದರು.

ಪ್ರೊ. ಪಿ. ವಿ. ಶೇಷು ಅಯ್ಯರ್ ಅಂತಹ ಹಿರಿಯರು ಮತ್ತು ಹಿತಚಿಂತಕರು ಟ್ರಿನಿಟಿ ಕಾಲೇಜಿನ ಫೆಲೋ ಆಗಿದ್ದ ಪ್ರೊ. ಜಿ. ಹೆಚ್ ಹಾರ್ಡಿ ಮತ್ತು ಕೇಂಬ್ರಿಜ್ ಗಣಿತ ಉಪನ್ಯಾಸಕರಾಗಿದ್ದ ಕ್ಯಾಲೆ ಅವರಿಗೆ ತಮ್ಮ ಗಣಿತೀಯ ಶೋಧನೆಗಳನ್ನು ತಿಳಿಸಬೇಕೆಂದು ರಾಮಾನುಜನ್ ಅವರನ್ನು ಒತ್ತಾಯಿಸಿದರು. ಇದನ್ನು ಮಾಡಲು ಮೊದಲು ಅವರಿಗೆ ಮನಸ್ಸಿರಲಿಲ್ಲ. ಆದರೆ ಒತ್ತಾಯ ಜಾಸ್ತಿಯಾದಾಗ ಅವರು ಪ್ರೊ. ಹಾರ್ಡಿಯವರಿಗೆ ಬರೆಯಲು ನಿರ್ಧರಿಸಿದರು. ಹೀಗೆ ಕ್ರಮೇಣ ಅವರ ಜೀವನವನ್ನೇ ಬದಲಿಸಿದ ಮತ್ತು ಭಾರತವನ್ನು ಪ್ರಪಂಚದ ಗಣಿತೀಯ ನಕ್ಷೆಯಲ್ಲಿ ಸೇರಿಸಿದ ಪತ್ರ ವ್ಯವಹಾರ ಪ್ರಾರಂಭಗೊಂಡಿತು. ತಮ್ಮ ಮೊದಲ ಪತ್ರದಲ್ಲೇ ರಾಮಾನುಜನ್ ನೂರಕ್ಕೂ ಹೆಚ್ಚು ಪ್ರಮೇಯಗಳನ್ನು ವಿವರಿಸಿದ್ದರು. ಈ ಚಿಂತನೆಗಳು ಕೇಂಬ್ರಿಜ್ನಲ್ಲಿ ಹೊಸ ಸಂಚಲನವನ್ನೇ ಉಂಟುಮಾಡಿತು. ಕ್ರಮೇಣದಲ್ಲಿ ಶ್ರೀನಿವಾಸನ್ ಕೆಂಬ್ರಿಡ್ಜ್ಗೆ ಬಂದಿಳಿದರು.

ರಾಮಾನುಜನ್ನರ ಕಾರ್ಯವಿಧಾನ ಸ್ವಂತಿಕೆಯಿಂದ ಕೂಡಿದ್ದು ಅವರ ಸಲಕರಣೆಗಳು ಸಂಪೂರ್ಣವಾಗಿ ಅವರದ್ದೇ ಆಗಿದ್ದುವು. ಇಂಗ್ಲೆಂಡಿನಲ್ಲಿ ಅವರಿದ್ದ ಐದು ವರ್ಷಗಳಲ್ಲಿ ಅವರ ಇಪ್ಪತ್ತೊಂದು ಪ್ರಬಂಧಗಳು ಯೂರೋಪಿನ ವಿವಿಧ ನಿಯತಕಾಲಿಕಗಳಲ್ಲಿ ಪ್ರಕಟವಾದವುಗಳಲ್ಲಿ ಐದು ಪ್ರೊ. ಹಾರ್ಡಿಯವರೊಂದಿಗೆ ಬರೆದುವು. ಪ್ರೊ. ಹಾರ್ಡಿ ಅವರಲ್ಲದೆ ಆ ಕಾಲದ ಶ್ರೇಷ್ಠ ವಿದ್ವಾಂಸರಾದ ಪ್ರೊ. ಜೆ. ಇ. ಲಿಟ್ಲ್ ವುಡ್, ಪ್ರೊ. ಎಲ್. ಜೆ. ಮೊರ್ಡಲ್, ಪ್ರೊ. ಜಿ. ಎನ್. ವಾಟ್ಸನ್ ಮುಂತಾದ ಸಕಲರೂ ಶ್ರೀನಿವಾಸ ರಾಮಾನುಜನ್ ಅವರ ಶ್ರೇಷ್ಠತೆಯನ್ನು ಕೊಂಡಾಡಿದರು.

ರಾಮಾನುಜನ್ನರ ಸಂಶೋಧನೆ ಅವರಿಗೆ ಉನ್ನತ ಪ್ರಶಂಸೆ ಮತ್ತು ಪ್ರತಿಷ್ಠೆಗಳನ್ನು ತಂದುಕೊಟ್ಟವು. ಬ್ರಿಟನ್ ಮತ್ತು ಅಂದಿನ ಬ್ರಿಟಿಷ್ ಸಾಮ್ರಾಜ್ಯದ ವಿಜ್ಞಾನ ಪ್ರಪಂಚದಲ್ಲಿ ಅತ್ಯುನ್ನತ ಗೌರವವಾದ ರಾಯಲ್ ಸೊಸೈಟಿಯ ಫೆಲೋ ಆಗಿ ಫೆಬ್ರುವರಿ 28, 1918ರಲ್ಲಿ ಶ್ರೀನಿವಾಸ ರಾಮಾನುಜನ್ ಚುನಾಯಿತರಾದರು. 1841ರಲ್ಲಿ ಸರ್ ಆರ್ ದೇಸೀರ್ ಕರ್ ಸೇಟ್ಜಿ ಅವರು ರಾಯಲ್ ಸೊಸೈಟಿಗೆ ಚುನಾಯಿತರಾಗಿದ್ದನ್ನು ಬಿಟ್ಟರೆ ಈ ಗೌರವ ಪಡೆದ ಪ್ರಥಮರು ರಾಮಾನುಜನ್ ಅವರೇ. ರಾಮಾನುಜನ್ನರ ಆಯ್ಕೆ ಮುಂದೆ ಭಾರತೀಯ ವಿಜ್ಞಾನಿಗಳನ್ನು ಉತ್ತೇಜನಗೊಳಿಸಿ ಒಂದೇ ದಶಕದೊಳಗೆ ಇನ್ನೂ ಮೂವರು ಚುನಾಯಿತರಾದರು. ಅವರೇ ಜಗದೀಶ್ ಚಂದ್ರ ಬೋಸ್, ಸಿ ವಿ ರಾಮನ್ ಮತ್ತು ಮೇಘನಾದ ಸಹಾ. ಹೀಗೆ ರಾಮಾನುಜನ್ನರ ಸಿದ್ಧಿ ಭಾರತೀಯ ವಿಜ್ಞಾನ ಮತ್ತು ಗಣಿತದಲ್ಲಿ ಹೊಸ ಯುಗವನ್ನು ಆರಂಭಿಸಿತು.

ಕೆಂಬ್ರಿಡ್ಜ್ನಲ್ಲಿ ಅಪ್ರತಿಮ ಪ್ರತಿಭಾವಂತರಾಗಿ ತಮ್ಮ ಸಂಶೋಧನೆಗಳನ್ನು ನಿರೂಪಿಸಿದ ರಾಮಾನುಜನ್ ಐದು ವರ್ಷಗಳ ನಂತರ ಭಾರತಕ್ಕೆ ಹಿಂದಿರುಗಿ ವಿದ್ವಾಂಸರಿಂದ ಅಭೂತಪೂರ್ವ ಮೆಚ್ಚುಗೆ ಮತ್ತು ಸ್ವಾಗತಗಳನ್ನು ಪಡೆದರು. ಆದರೆ ದುರದೃಷ್ಟವಶಾತ್ ಅವರ ಆರೋಗ್ಯ ಕ್ಷೀಣಿಸುತ್ತಿತ್ತು. ಉತ್ತಮ ವೈದ್ಯಕೀಯ ಸೌಲಭ್ಯ ಹಾಗೂ ಬಹು ನಾಜೂಕಾದ ಉಪಚಾರ ಮತ್ತು ಮೇಲ್ವಿಚಾರಣೆ ಇದ್ದರೂ ಅವರು ಏಪ್ರಿಲ್ 26, 1920ರಂದು 32 ವರ್ಷ, 4 ತಿಂಗಳು, 4 ದಿವಸಗಳ ತರುಣ ವಯಸ್ಸಿನಲ್ಲೇ ತೀರಿಕೊಂಡರು. ಭರತಖಂಡ ಹಾಗೂ ಜಗತ್ತು ಮತ್ತೆ ಅಂದಿನವರೆಗೆ ಕಂಡಿಲ್ಲದಂಥ ಮಹಾನ್ ಗಣಿತ ಪ್ರತಿಭೆಯನ್ನು ಕಳೆದುಕೊಂಡಿತು.

ಹಾರ್ಡಿ ಹೇಳುತ್ತಾರೆ: “ರಾಮಾನುಜನ್ ಅವರಲ್ಲಿ ಪರಮಾದ್ಭುತವಾದುದೆಂದರೆ ಬೀಜಗಣಿತದ ಸೂತ್ರಗಳು, ಅನಂತ ಶ್ರೇಣಿಗಳ ಪರಿವರ್ತನೆ ಮುಂತಾದವುಗಳಲ್ಲಿದ್ದ ಅವರ ಅಂತರ್ದೃಷ್ಟಿ. ಈ ವಿಷಯಗಳಲ್ಲಿ ಅವರಿಗೆ ಸಮನಾದವರನ್ನು ಖಂಡಿತವಾಗಿಯೂ ನಾನು ಕಂಡಿಲ್ಲ. ಅವರನ್ನು ಅಯ್ಳರ್ ಅಥವಾ ಜುಕೊಬಿಯಂತಹ ಸಾರ್ವಕಾಲಿಕ ಶ್ರೇಷ್ಠರೊಂದಿಗೆ ಮಾತ್ರ ಹೋಲಿಸಲು ಸಾಧ್ಯ. ರಾಮಾನುಜನ್ ಅವರ ಸ್ಮರಣ ಶಕ್ತಿ, ಸಹನೆ, ಗಣಿಸುವ ಸಾಮರ್ಥ್ಯಗಳೊಂದಿಗೆ ಸಾರ್ವತ್ರೀಕರಣ ಶಕ್ತಿ, ಸ್ವರೂಪ ಜ್ಞಾನ, ಆಧಾರ ಭಾವನೆಗಳನ್ನು ಕ್ಷಿಪ್ರವಾಗಿ ಬದಲಾಯಿಸುವ ಚಾಕಚಕ್ಯತೆ ಇವು ಅನೇಕ ವೇಳೆ ದಂಗುಬಡಿಸುತ್ತಿದ್ದವು. ರಾಮಾನುಜನ್ ಅವರದೇ ಆದ ಈ ಕ್ಷೇತ್ರದಲ್ಲಿ ಆ ಕಾಲದಲ್ಲಿ ಅವರಿಗೆ ಸರಿಸಾಟಿಗಳಿಲ್ಲದಂತೆ ಮಾಡಿದವು”

ಈ ಮಹಾನ್ ಚೇತನದ ಸ್ಮರಣೆಗೆ ನಮ್ಮ ನಮನ.

ಕೃಪೆ : ಕನ್ನಡ ಸಂಪದ ಫೇಸ್ಬುಕ್ ಪೋಸ್ಟ್

Saturday, June 13, 2020

ರಾಮನ್ ಪರಿಣಾಮ


ಪ್ರಖ್ಯಾತ ಭೌತಶಾಸ್ತ್ರಜ್ಞ ಸರ್ ಚಂದ್ರಶೇಖರ ವೆಂಕಟ ರಾಮನ್ ಅವರು 1928 ರ ಫೆಬ್ರವರಿ 28 ರಂದು ಕಂಡುಹಿಡಿದ ಸ್ಪೆಕ್ಟ್ರೋಸ್ಕೋಪಿಯಲ್ಲಿ ಇದು ಒಂದು ವಿದ್ಯಮಾನವಾಗಿದೆ.


ಅವರ ಗೌರವಾರ್ಥವಾಗಿ, ಫೆಬ್ರವರಿ 28 ಅನ್ನು ಭಾರತದಲ್ಲಿ ರಾಷ್ಟ್ರೀಯ ವಿಜ್ಞಾನ ದಿನವೆಂದು ಆಚರಿಸಲಾಗುತ್ತದೆ.

1930 ರಲ್ಲಿ, ಈ ಗಮನಾರ್ಹ ಆವಿಷ್ಕಾರಕ್ಕಾಗಿ ಅವರು ನೊಬೆಲ್ ಪ್ರಶಸ್ತಿ ಪಡೆದರು ಮತ್ತು ಇದು ವಿಜ್ಞಾನ ಕ್ಷೇತ್ರದಲ್ಲಿ ಭಾರತಕ್ಕೆ ನೀಡಿದ ಮೊದಲ ನೊಬೆಲ್ ಪ್ರಶಸ್ತಿ.

ರಾಮನ್ ಪರಿಣಾಮವು ಅಣುಗಳಿಂದ ಫೋಟಾನ್‌ನ ಅನಿರ್ದಿಷ್ಟ ಚದುರುವಿಕೆ, ಅದು ಹೆಚ್ಚಿನ ಕಂಪನ ಅಥವಾ ಆವರ್ತಕ ಶಕ್ತಿಯ ಮಟ್ಟಗಳಿಗೆ ಉತ್ಸುಕವಾಗಿರುತ್ತದೆ. ಇದನ್ನು ರಾಮನ್ ಸ್ಕ್ಯಾಟರಿಂಗ್ ಎಂದೂ ಕರೆಯುತ್ತಾರೆ.

ಸರಳವಾಗಿ ಹೇಳುವುದಾದರೆ, ಇದು ಬೆಳಕಿನ ಕಿರಣವನ್ನು ಅಣುಗಳಿಂದ ತಿರುಗಿಸಿದಾಗ ಸಂಭವಿಸುವ ಬೆಳಕಿನ ತರಂಗಾಂತರದಲ್ಲಿನ ಬದಲಾವಣೆಯಾಗಿದೆ.

ಬೆಳಕಿನ ಕಿರಣವು ರಾಸಾಯನಿಕ ಸಂಯುಕ್ತದ ಧೂಳು-ಮುಕ್ತ, ಪಾರದರ್ಶಕ ಮಾದರಿಯನ್ನು ಹಾದುಹೋದಾಗ, ಘಟನೆಯ (ಒಳಬರುವ) ಕಿರಣವನ್ನು ಹೊರತುಪಡಿಸಿ ಬೇರೆ ದಿಕ್ಕುಗಳಲ್ಲಿ ಬೆಳಕಿನ ಒಂದು ಸಣ್ಣ ಭಾಗವು ಹೊರಹೊಮ್ಮುತ್ತದೆ.

ಈ ಚದುರಿದ ಬೆಳಕಿನಲ್ಲಿ ಹೆಚ್ಚಿನವು ಬದಲಾಗದ ತರಂಗಾಂತರವನ್ನು ಹೊಂದಿವೆ. ಆದಾಗ್ಯೂ, ಒಂದು ಸಣ್ಣ ಭಾಗವು ಘಟನೆಯ ಬೆಳಕಿನಿಂದ ಭಿನ್ನವಾದ ತರಂಗಾಂತರಗಳನ್ನು ಹೊಂದಿದೆ ಮತ್ತು ಅದರ ಉಪಸ್ಥಿತಿಯು ರಾಮನ್ ಪರಿಣಾಮದ ಪರಿಣಾಮವಾಗಿದೆ.

ರಾಮನ್ ಪರಿಣಾಮವು ರಾಮನ್ ಸ್ಪೆಕ್ಟ್ರೋಸ್ಕೋಪಿಗೆ ಆಧಾರವಾಗಿದೆ, ಇದನ್ನು ರಸಾಯನಶಾಸ್ತ್ರಜ್ಞರು ಮತ್ತು ಭೌತವಿಜ್ಞಾನಿಗಳು ವಸ್ತುಗಳ ಬಗ್ಗೆ ಮಾಹಿತಿ ಪಡೆಯಲು ಬಳಸುತ್ತಾರೆ.

ಸ್ಪೆಕ್ಟ್ರೋಸ್ಕೋಪಿ ಎಂದರೆ ಮ್ಯಾಟರ್ ಮತ್ತು ವಿದ್ಯುತ್ಕಾಂತೀಯ ವಿಕಿರಣದ ನಡುವಿನ ಪರಸ್ಪರ ಕ್ರಿಯೆಯ ಅಧ್ಯಯನ.